ಬೆಳಗಾವಿ: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.