alex Certify BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡ್ತಾರೆ ಎಂದು ಕಿಡಿಕಾರಿದರು.

ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳ್ತಾರೆ? ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಆದರೆ ಕುಮರಸ್ವಾಮಿಯವರ ಕೊಡುಗೆಯೇನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿಗೆ ಕೆಆರ್ ಎಸ್ ನಿಂದ ನೀರು ಹರಿಸುತ್ತಿರುವ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಿ ಮಾತನಾಡಲಿ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿರುವ ಎರಡೂ ಪಕ್ಷದ ನಾಯಕರು ಕಾವೇರಿ ವಿಚಾರವಾಗಿ ಪ್ರಧಾನಿ ಬಳಿ ಚರ್ಚಿಸಲಿ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...