
ಚಾಮರಾಜನಗರ: ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಸವಾರರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಬಳಿ ನಡೆದಿದೆ.
ಡೇವಿಡ್, ಸೇತು, ಶೇಷುರಾಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟವರು ಹನೂರು ತಾಲೂಕಿನ ಪಾಡಿಮೇಡು ಗ್ರಾಮದವರಾಗಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಗೂಡ್ಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.