![](https://kannadadunia.com/wp-content/uploads/2021/07/srinivasa-prasad.jpg)
ಚಾಮರಾಜನಗರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಭೆ ನಡೆಸಿದ್ದು, ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದಿದ್ದಾರೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಗೆಲುವು ನಮ್ಮದಾಗಿರುತ್ತದೆ. ಇದೇ ಮಾತನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ನವರು ಹೇಳಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನ ಗಳಿಸಿದವರು ಮತ್ತು ಕಳೆದ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡವರೇ ಹೇಳುತ್ತಿರುವಾಗ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನ ಗೆದ್ದ ನಾವು ಇನ್ನೆಷ್ಟು ಜೋರಾಗಿ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.