alex Certify ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…?

ಚಾಮರಾಜನಗರ: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳು ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ.

ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ ಕಥೆ ಕಟ್ಟಿದ್ದಾನೆ. ಪತ್ನಿ ಮೇಘಾ(24), ಪುನ್ವಿತಾ(6), ಮನ್ವಿತಾ(3) ಮೃತಪಟ್ಟ ದುರ್ದೈವಿಗಳು.

ಪತಿ ಅಭಿ ಅಲಿಯಾಸ್ ಧನಂಜಯ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತೆರಕಣಾಂಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...