ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರದಿಂದ ನಿ. ನ್ಯಾಯಮೂರ್ತಿ ಬಿ.ಎ. ಪಾಟೀಲ ಸಮಿತಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ್ ಅವರನ್ನು ನೇಮಕ ಮಾಡಿರುವ ಕುರಿತು ಎಜಿ ಪ್ರಭುಲಿಂಗ ನಾವದಗಿ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಆದೇಶದ ಪ್ರತಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣದ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಒಂದು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಪಾಟೀಲ್ ಅವರ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ. ಪ್ರಕರಣದ ಬೆನ್ನಲ್ಲೇ ಹಿರಿಯ ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ 3 ದಿನಗಳಲ್ಲಿ ವರದಿ ನೀಡಲು ಸೂಚಿಸಿದೆ.