alex Certify ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರದಿಂದ ನಿ. ನ್ಯಾಯಮೂರ್ತಿ ಬಿ.ಎ. ಪಾಟೀಲ ಸಮಿತಿ ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ್ ಅವರನ್ನು ನೇಮಕ ಮಾಡಿರುವ ಕುರಿತು ಎಜಿ ಪ್ರಭುಲಿಂಗ ನಾವದಗಿ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಆದೇಶದ ಪ್ರತಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣದ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಒಂದು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಪಾಟೀಲ್ ಅವರ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ. ಪ್ರಕರಣದ ಬೆನ್ನಲ್ಲೇ ಹಿರಿಯ ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ 3 ದಿನಗಳಲ್ಲಿ ವರದಿ ನೀಡಲು ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...