
ಚಾಮರಾಜನಗರ: ಸಚಿವ ಸ್ಥಾನ ಪಡೆಯಲು ದೆಹಲಿವರೆಗೂ ಹೋಗಿ ಒತ್ತಡ ಹೇರಿ ಬಂದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಚಿವರಾಗಲಿದ್ದಾರೆ.
ಈ ಬಗ್ಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಮಾತನಾಡಿ, ರಮೇಶ್ ಜಾರಕಿಹೊಳಿ ಮತ್ತು ಮುನಿರತ್ನ ಅವರು ಸಚಿವರಾಗಲಿದ್ದಾರೆ ಎಂದು ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ. ರಮೇಶ್ ಜಾರಕಿಹೊಳಿ, ಮುನಿರತ್ನ ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಮೇಲಿನ ಆರೋಪಗಳು ಕಟ್ಟು ಕಥೆಯಾಗಿದ್ದು, ಅವರು ಶೀಘ್ರವೇ ಆರೋಪಮುಕ್ತರಾಗಿ ಸಚಿವರಾಗಲಿದ್ದಾರೆ ಎಂದು ಹೇಳಿದ್ದಾರೆ.