
ಚಾಮರಾಜನಗರ: ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸ್ ಕಾನ್ ಸ್ಟೇಬಲ್ ನನ್ನು ರಾಮಸಮುದ್ರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತೆಮರಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ ಇರಸವಾಡಿ ಸುತ್ತೂರಿನವರಾಗಿದ್ದಾರೆ. ಅನೇಕ ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸಿದ್ದ ಕಾನ್ ಸ್ಟೇಬಲ್ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದು, ಕೆಲವು ತಿಂಗಳ ಹಿಂದೆ ಪೊಲೀಸ್ ಕೆಲಸ ಸಿಗುತ್ತಿದ್ದಂತೆ ದೂರವಾಗಿದ್ದರು ಎನ್ನಲಾಗಿದೆ.
ನೊಂದ ಯುವತಿ ಸೋಮವಾರ ಅತ್ಯಾಚಾರದ ದೂರು ದಾಖಲಿಸಿದ್ದು, ಮಂಗಳವಾರ ಆರೋಪಿ ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.