ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನೇನೇಕಟ್ಟೆ ಗ್ರಾಮದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೇಸತ್ತು 65 ವರ್ಷದ ಕೃಷ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್ ಖರೀದಿಗೆ ಖಾಸಗಿ ಫೈನಾನ್ಸ್ ನಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಇಎಂಐ ಕಟ್ಟದ ಕಾರಣ ಖಾಸಗಿ ಫೈನಾನ್ಸ್ ನವರು ಟ್ರ್ಯಾಕ್ಟರ್ ಸೀಜ್ ಮಾಡಿದ್ದರು. ಇದರಿಂದ ಅವಮಾನ ತಾಳದೆ ವಿಷ ಸೇವಿಸಿ ಕೃಷ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.