alex Certify ಜಮೀನಿನಲ್ಲಿ ಕೆಲಸ ಮಾಡುವಾಗಲೇ ಹುಲಿ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ರೈತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಕೆಲಸ ಮಾಡುವಾಗಲೇ ಹುಲಿ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ರೈತ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಹುಲಿ ದಾಳಿ ಮಾಡಿದ್ದು, ರೈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಬಂಡಿಪುರ ಕಾಡಂಚಿನ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಘಟನೆ ನಡೆದಿದೆ. ನಾಗರಾಜು ಎಂಬ ರೈತ ಜಮೀನಿನಲ್ಲಿದ್ದ ವೇಳೆ ಅವರ ಮೇಲೆ ಹುಲಿ ಏಕಾಏಕಿ ಎರಗಿದೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.

ಎರಡು ವರ್ಷದ ಹಿಂದೆ ಇದೆ ಸ್ಥಳದಲ್ಲಿ ಹುಲಿ ಇಬ್ಬರನ್ನು ಬಲಿ ಪಡೆದಿತ್ತು. ಚೌಡಹಳ್ಳಿಯಲ್ಲಿ ಮತ್ತೆ ಹುಲಿ ಹಾವಳಿ ಶುರುವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ನಿನ್ನೆ ಗ್ರಾಮದ ಬಳಿ ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿತ್ತು. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...