ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಇಸಿ ಇಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ.
ದಲಿತ ಸಂಘಟನೆಗಳು ಇಂದು ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಾಣಿಜ್ಯ ವಹಿವಾಟು ಸ್ತಬ್ದಗೊಂದಿದೆ. ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಮಾರುಕಟ್ಟೆ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕಲಾಗಿದೆ. ನಗರ ವ್ಯಪತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೆ.ಎಸ್.ಆರ್.ಟಿಸಿ ಬಸ್, ಆಟೋ ಸಂಚಾರ ಎಂದಿನಂತೆ ಇದೆ. ಚಾಮರಾಜನಗರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.