
ಬೆಂಗಳೂರು: ಚಾಮರಾಜನಗರ ಜಿಲ್ಲಿಯ ಮಲೈಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದ್ದು, ಚಾಮರಾಜನಗರದ ಬದಲಾಗಿ ಬೆಂಗಳೂರಿನಲ್ಲಿಯೇ ಸಂಪುಟ ಸಭೆ ನಿಗದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿಯೇ ಫೆ.20ರಂದು ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಪೆಟ್ಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೇ ಫೆ.20ರಂದು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.