ಚಾಮರಾಜನಗರ : ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಚಾಮರಾಜನಗರದ ಯಡವನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಎಂಬುವವರನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಿಇಒ ಡಾ.ನವೀನ್ಕುಮಾರ್ ಆದೇಶ ಹೊರಡಿಸಿದ್ದಾರೆ.
ಜು.18 ರಂದು ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು, ನಂತರ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.