
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚೊವ ಸಂಪುಟ ಸಭೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಮಲೈ ಮಹೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.