alex Certify BIG NEWS: ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ನ್ನೇ ಕದ್ದು ಪರಾರಿಯಾದ ಕಳ್ಳ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ನ್ನೇ ಕದ್ದು ಪರಾರಿಯಾದ ಕಳ್ಳ!

ಚಾಮರಾಜನಗರ: ಕಳ್ಳರು, ದರೋಡೆಕೋರರಿಗೆ ಪೊಲೀಸರೆಂದರೆ ಕಿಂಚಿತ್ತೂ ಭಯವಿದ್ದಂತೆ ಕಾಣುತ್ತಿಲ್ಲ. ರಾಜಾರೋಷವಾಗಿ ಪೋಲೀಸ್ ಠಾಣೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಳ್ಳನೊಬ್ಬ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ನ್ನೇ ಕದ್ದು ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ನುಗ್ಗಿದ ಕಳ್ಳ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ಸಮೇತ ಪರಾರಿಯಾಗಿದ್ದಾನೆ. ಈ ಬೈಕ್ ಎನ್ ಡಿ ಪಿಎಸ್ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿದ್ದ ಬೈಕ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಸ್ಕೇಪ್ ಆಗಿರುವ ಕಳ್ಳನ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...