ಚಾಮರಾಜನಗರ: ಸರ್ಕಾರಿ ಶಾಲೆಗಳನ್ನು ಉಳಿಸಿ ಎಂಬುದು ಕೇವಲ ಬಾಯಿಮಾತಾಗಿದೆ. ಕಟ್ಟಡಗಳ ದುರಾವಸ್ಥೆ, ಶಿಕ್ಷಕರ ಕೊರತೆ, ನಿರೀಕ್ಷಿತ ರೀತಿಯಲ್ಲಿ ಶಿಕ್ಷಣ ಇಲ್ಲದಿರುವ ಕಾರಣಕ್ಕೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುವುದೂ ಕಡಿಮೆಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ 13 ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಬೀಗ ಹಾಕಿದ ಘಟನೆ ನಡೆದಿದೆ.
ಶೂನ್ಯ ದಾಖಲಾತಿ, ಕಟ್ಟಡಗಳ ದುರಸ್ಥಿಯಿಂದಾಗಿ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಬಾರದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿದಿದೆ. ಅಳಿವಿನಂಚಿನಲ್ಲಿರುವ ಸರ್ಕಾರಿ ಶಾಲೆಗಳ ಪುನಶ್ಚೇತನ ಕಾರ್ಯ ನಡೆಯುತ್ತಿಲ್ಲ. ಹಾಗಾಗಿ ಶಾಲೆಗಳ ಬಾಗಿಲು ಮುಚ್ಚಬೇಕಾದ ಸ್ಥಿತಿ ಇದೆ.
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರಮುಖವಾಗಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಬರೋಬ್ಬರಿ 13 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.