ಚಾಮರಾಜನಗರ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಚಾಮರಾಜನಗರದ ಜಿಲ್ಲೆಯಾದ್ಯಂತ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಚಾಮರಾಜನಗರದಲ್ಲಿ ಬಸ್ ಗಳಿಲ್ಲದೇ ಸಾರ್ವಜನಿಕರು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಜಿಲ್ಲೆಯಲ್ಲಿನ ಬಸ್ ಗಳು ಗೃಹಲಕ್ಷ್ಮೀ ಯೋಜನೆ ಹಿನ್ನೆಲೆಯಲ್ಲಿ ಮೈಸೂರಿಗೆ ನಿಯೋಜಿಸಲಾಗಿದೆ. ಇದರಿಂದಾಗಿ ಬಸ್ ಗಳಿಲ್ಲದೇ ಪ್ರಯಾಣಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ.
ಚಾಮರಾಜನಗರ ಜಿಲ್ಲೆಯೊಂದರಲ್ಲೇ 310 ಬಸ್ ಗಳನ್ನು ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗಿದೆ. ಬಸ್ ಗಳಿಲ್ಲದೇ ದೂರದೂರಿಗೆ ಪ್ರಯಾಣ ಬೆಳೆಸಲು ಪ್ರಯಾಣಿಕರು ಪರದಾಡುವಂತಾಗಿದೆ.