ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಳಿಸಿ ಹಾಕಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜ ನಗರಕ್ಕೆ 12 ಬಾರಿ ಭೇಟಿ ನೀಡಿ ಗಮನ ಸೆಳೆದಿದ್ದ ಸಿದ್ದರಾಮಯ್ಯ ಇಂದು ಮತ್ತೊಮ್ಮೆ ಭೇಟಿ ಕೊಟ್ಟಿದ್ದಾರೆ.
ಚಾಮರಾಜನಗರಕ್ಕೆ ಭೇಟಿ ನೀಡಿದರೆ 6 ತಿಂಗಳ ಒಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಗೆ ಸಿಎಂ ಸೆಡ್ಡು ಹೊಡೆದಿದ್ದಾರೆ. 1991ರಲ್ಲಿ ವಿರೇಂದ್ರ ಪಾಟೀಲ್ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೇ ಕೊನೆ. ಅಂದಿನಿಂದ ಇಂತದ್ದೊಂದು ಅಪನಂಬಿಕೆ ಕಳಂಕ ಆರಂಭವಾಗಿತ್ತು.
ಇಂತಹ ಮೌಢ್ಯಕ್ಕೆ ಬೆದರಿದ ಎಸ್. ಬಂಗಾರಪ್ಪ, ವೀರಪ್ಪಮೊಯ್ಲಿ, ಹೆಚ್.ಡಿ.ದೇವೇಗೌಡ, ಜೆ.ಹೆಚ್.ಪಟೇಲ್, ಎಸ್.ಎಂ.ಕೃಷ್ಣ, ಧರಂಸಿಂಗ್ ಸೇರಿದಂತೆ ಹಲವರು ಚಾಮರಾಜನಗರಕ್ಕೆ ಕಾಲಿಟ್ಟಿರಲಿಲ್ಲ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಈ ಹಿಂದೆ 12 ಬಾರಿ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಇಂದು ಮತ್ತೆ ಭೇಟಿ ನೀಡಿದ್ದಾರೆ.