ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಾಗರಿಕ ಒಕ್ಕೂಟದಿಂದ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಬೆಂಬಲ ನೀಡಲಾಗಿದೆ. ಹಿಂದೂ ಜನ ಜಾಗೃತಿ ಸಮಿತಿ, ವಿಶ್ವಸನಾತನ ಪರಿಷತ್, ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರಣ ಸಮಿತಿಯಿಂದ ಬಂದ್ ಗೆ ಬೆಂಬಲ ನೀಡಲಾಗಿದೆ. ಸುಮಾರು 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ.
ಚಾಮರಾಜಪೇಟೆ ನಾಗರೀಕರ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಈದ್ಗಾ ಮೈದಾನಕ್ಕಾಗಿ ಇಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಂದೋಬಸ್ತ್ ಗಾಗಿ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರು ಡಿಸಿಪಿ, 10 ಎಸಿಪಿ, 20 ಇನ್ಸ್ಪೆಕ್ಟರ್, 120 ಎಎಸ್ಐ, 500ಕ್ಕೂ ಹೆಚ್ಚು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.
ಚಾಮರಾಜ ಪೇಟೆ ಕ್ಷೇತ್ರ ಬಂದ್ ಮಾಡಲು ಯಾವುದೇ ಅನುಮತಿಯನ್ನು ಪಡೆದುಕೊಂಡಿಲ್ಲ. ಸರ್ಕಾರ ಅಥವಾ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಸ್ವಯಂ ಪ್ರೇರಿತ ಬಂದ್ ಗೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ಕರೆ ನೀಡಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲು ಯತ್ನಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.