
ನವದೆಹಲಿ: ನಾಯಕ ರೋಹಿತ್ ಶರ್ಮಾ ಅತ್ಯುತ್ತಮ ಅರ್ಧಶತಕದೊಂದಿಗೆ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ್ದು, ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್ಗಳ ಜಯ ಸಾಧಿಸುವ ಮೂಲಕ ಭಾರತ ಅಭೂತಪೂರ್ವ ಮೂರನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ್ದಾರೆ. ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದಿದ್ದಕ್ಕಾಗಿ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಮೋದಿ ತಿಳಿಸಿದ್ದಾರೆ.
ಭಾರತ ತಂಡಕ್ಕೆ ರಾಷ್ಟ್ರಪತಿ ಅಭಿನಂದನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ ಮೂರು ಬಾರಿ ಟ್ರೋಫಿ ಗೆದ್ದ ಏಕೈಕ ತಂಡವಾಗಿದೆ. ಕ್ರಿಕೆಟ್ ಇತಿಹಾಸ ಸೃಷ್ಟಿಸಿದ್ದಕ್ಕಾಗಿ ಆಟಗಾರರು, ಆಡಳಿತ ಮಂಡಳಿ ಮತ್ತು ಸಹಾಯಕ ಸಿಬ್ಬಂದಿ ಅತ್ಯುನ್ನತ ಪ್ರಶಂಸೆಗೆ ಅರ್ಹರು. ಭಾರತೀಯ ಕ್ರಿಕೆಟ್ಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
An exceptional game and an exceptional result!
Proud of our cricket team for bringing home the ICC Champions Trophy. They’ve played wonderfully through the tournament. Congratulations to our team for the splendid all round display.
— Narendra Modi (@narendramodi) March 9, 2025
Heartiest congratulations to Team India for winning the ICC Champions Trophy, 2025. India becomes the only team to win the Trophy thrice. The players, the management and the support staff deserve highest accolades for creating cricketing history. I wish Indian cricket a very…
— President of India (@rashtrapatibhvn) March 9, 2025