
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ(ಚಾಮುಲ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ಕಾಂಗ್ರೆಸ್ ಪಕ್ಷ 4, ಬಿಜೆಪಿ 2, ಪಕ್ಷೇತರರು 2 ಹಾಗೂ ಜೆಡಿಎಸ್ 1 ಸ್ಥಾನದಲ್ಲಿ ಜಯಗಳಿಸಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ ಅವರಿಗೆ ಮುಖಭಂಗವಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಸುನಿಲ್, ಕಾಂಗ್ರೆಸ್ ಪಕ್ಷದ ನಂಜುಂಡ ಪ್ರಸಾದ್ ಹಾಗೂ ಮಹಿಳಾ ಕ್ಷೇತ್ರದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಪುತ್ರಿ ಶೀಲಾ ಜಯಗಳಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.