
ಬೆಂಗಳೂರು: ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ.
ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ.
ಜನವರಿ 13ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವಿಡಿಯೋ ಮೂಲಕ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಈ ಕುರಿತಾದ ವೇಳಾಪಟ್ಟಿಯನ್ನು ನೀಡಲಾಗಿದ್ದು, ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ತಲುಪಿಸುವಂತೆ ಶಿಕ್ಷಕರುಗಳಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.