ನವದೆಹಲಿ: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
‘ಮನ್ ಕಿ ಬಾತ್’ ರೇಡಿಯೋ ಪ್ರಸಾರದಲ್ಲಿ ಮಾತನಾಡಿದ ಅವರು, ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಲಾಗುವುದು ಎಂದು ಘೋಷಿಸಿದ್ದಾರೆ.
ಸೆ.28ರಂದು ಭಗತ್ ಸಿಂಗ್ ಅವರ ಜನ್ಮ ದಿನಾಚರಣೆ ನಡೆಯಲಿದೆ. ಅವರ ‘ಅಮೃತ ಮಹೋತ್ಸವ’ದ ಮಹತ್ವದ ದಿನ ಗೌರವಾರ್ಥವಾಗಿ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಚೀತಾಗಳ ವಾಪಸಾತಿ ಬಗ್ಗೆ 130 ಕೋಟಿ ಭಾರತೀಯರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕಾರ್ಯಪಡೆ ಅವುಗಳ ಮೇಲೆ ನಿಗಾ ವಹಿಸಿದೆ. ಜನರು ಯಾವಾಗ ಅವುಗಳನ್ನು ನೋಡಬಹುದು ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ ಎಂದು ಹೇಳಿದರು.