ಲಖ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿ ನಡೆದಾಗ ಚಂದ್ರಶೇಖರ್ ಆಜಾದ್ ಇತರ ನಾಲ್ವರೊಂದಿಗೆ ಟೊಯೊಟಾ ಫಾರ್ಚುನರ್ನಲ್ಲಿ ಪ್ರಯಾಣಿಸುತ್ತಿದ್ದರು.
ಉತ್ತರ ಪ್ರದೇಶದ ಸಹರಾನ್ಪುರ ಬಳಿ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿತ್ತು. ಹರಿಯಾಣ ನೋಂದಣಿ ಸಂಖ್ಯೆ ಇರುವ ವಾಹನದಲ್ಲಿ ಬಂದಿದ್ದ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ ಆಜಾದ್ ಅವರನ್ನು ಸಹರಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬುಧವಾರ ಸಂಜೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಂಬೇಡ್ಕರ್ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರ್ ನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದರು.