ನವದೆಹಲಿ : ಜೂ.12 ರಂದು ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇದರ ಜೊತೆಗೆ ಜೂ.12 ರಂದು ನಡೆಯಲಿರುವ ಒಡಿಶಾ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆ ಜೊತೆಗೆ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆದಿದ್ದು, ಚಂದ್ರಬಾಬು ನೇತೃತ್ವದ ತೆಲುಗು ದೇಶಂ ಪಾರ್ಟಿ, ಆಡಳಿತರೂಢ ಜಗನ್ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷವನ್ನು ವಿಧಾನಸಭಾ ಚುನಾವಣೆಯಲ್ಲಿ ಮಣಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಹಾಗೆಯೇ ಲೋಕಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಪಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ 130 ಸ್ಥಾನಗಳನ್ನು ಗಳಿಸಿದ್ದು ನಿಚ್ಚಳ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಟಿ ಡಿ ಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೂನ್ 12 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.