ಹುಬ್ಬಳ್ಳಿ: ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.
ಆರೋಪಿತರಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು ಜುಲೈ 18 ರವರೆಗೆ ಜೆಎಂಎಫ್ಸಿ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿದ್ದರು. ಕೋರ್ಟ್ ಆರು ದಿನಗಳ ಕಾಲ ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ವಹಿಸಿದೆ.