alex Certify ‘ಚಂದ್ರಯಾನ-3’ ಸಕ್ಸಸ್ : ‘ISRO’ ಕೇಂದ್ರದಲ್ಲಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಸಕ್ಸಸ್ : ‘ISRO’ ಕೇಂದ್ರದಲ್ಲಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ‘ISRO’ ಕೇಂದ್ರಕ್ಕೆ ‘ಸಿಎಂ ಸಿದ್ಧರಾಮಯ್ಯ’ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC ಕೇಂದ್ರಕ್ಕೆ ಸಿಎಂ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಂತರ ವಿಜ್ಞಾನಿಗಳ ಜೊತೆ ಕೆಲಹೊತ್ತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ : ಸಿಎಂ ಸಿದ್ದರಾಮಯ್ಯ
ಚಂದ್ರಯಾನ ಯಶಸ್ವಿಯಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದು, ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...