alex Certify Chandrayaan-3 : `ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು’ : ನಟ ಪ್ರಕಾಶ್ ರಾಜ್ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Chandrayaan-3 : `ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು’ : ನಟ ಪ್ರಕಾಶ್ ರಾಜ್ ಟ್ವೀಟ್

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander) ಸಾಫ್ಟ್ ಲ್ಯಾಂಡಿಂಗ್ (Soft landing) ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, ಚೀನಾದ ಬಳಿಕ ಐತಿಹಾಸಿಕ ಸಾಧನೆ ಮಾಡಿದೆ.

ಚಂದ್ರಯಾನ 3 ಬಗ್ಗೆ ವ್ಯಂಗ್ಯ ಮಾಡಿ ಟ್ವಿಟ್​ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಬಹುಭಾಷಾ ನಟ ಪ್ರಕಾಶ್​ ರಾಜ್ ಇದೀಗ ಚಂದ್ರಯಾನ 3ರ ವಿಕ್ರಮ್​ ಲ್ಯಾಂಡರ್ ಚಂದ್ರನ ಅಂಗಳವನ್ನು ಯಶಸ್ವಿಯಾಗಿ ತಲುಪಿದೆ.  ಈ ಬಗ್ಗೆ ನಟ ಪ್ರಕಾಶ್​ ರಾಜ್ ಟ್ವೀಟ್​ ಮಾಡಿದ್ದಾರೆ.

ನಟ ಪ್ರಕಾಶ್ ರಾಜ್ ಟ್ವಿಟರ್ ನಲ್ಲಿ, ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು , ಇದು ದಾರಿಯಾಗಲಿ ಎಂದು ​ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...