alex Certify ಇಸ್ರೋಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ರೋಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಇಸ್ರೋನ ಇಸ್ಟ್ರಾಕ್ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವ ಬೋಸರಾಜು ಮೊದಲಾದವರು ಭೇಟಿ ನೀಡಲಿದ್ದಾರೆ.

ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ನಿರ್ವಹಿಸಿದ ಇಸ್ರೋ ಟೆಲಿಮೆಂಟರಿ ಟ್ರಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಬೆಳೆಗೆ 10:30 ಕ್ಕೆ ಭೇಟಿ ನೀಡಿ ವಿಜ್ಞಾನಿಗಳ ಮುಖ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ ಯಶಸ್ವಿಯಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದು, ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...