ಬೆಂಗಳೂರು: ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಯುವಕ ಚಂದ್ರು ಎಂಬಾತನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಕೊಲೆಯಾಗಿದೆ ಎಂದು ತಿಳಿದುಬಂದಿದೆ.
ಚಂದ್ರು ಹತ್ಯೆ ಪ್ರಕರಣ ಸಂಬಂಧ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಬೈಕ್ ತೆಗೆಯುವ ವೇಳೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಯುವಕ ಚಂದ್ರುಗೆ ಉರ್ದು ಮಾತನಾಡಲು ದುಷ್ಕರ್ಮಿಗಳು ಹೇಳಿದ್ದಾರೆ. ಆದರೆ ಆತ ತನಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಎಂದು ಹೇಳಿದ್ದಾನೆ. ಉರ್ದು ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಎಂದರು.
ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?
ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.