alex Certify ರಾಷ್ಟ್ರಪತಿ ಭವನದಲ್ಲಿ ಮತ್ತೆ ಆರಂಭವಾಗಲಿದೆ ಚಿತ್ತಾಕರ್ಷಕ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರಪತಿ ಭವನದಲ್ಲಿ ಮತ್ತೆ ಆರಂಭವಾಗಲಿದೆ ಚಿತ್ತಾಕರ್ಷಕ ಕಾರ್ಯಕ್ರಮ

ರಾಷ್ಟ್ರಪತಿ ಭವನದ ಅತ್ಯಂತ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ’ಚೆಂಜ್ ಆಫ್ ಗಾರ್ಡ್‌’ ಕಾರ್ಯಕ್ರಮವು ಅಕ್ಟೋಬರ್‌ 9ರಿಂದ ಮರು ಆರಂಭವಾಗಲಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಸಮಾರಂಭವು ಪ್ರತಿ ಶನಿವಾರ, ಸಾರ್ವಜನಿಕ ರಜಾದಿನ ಹೊರತುಪಡಿಸಿ, ಬೆಳಿಗ್ಗೆ 8ರಿಂದ 9 ಗಂಟೆವರೆಗೆ ನಡೆಯಲಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಮುಂಗಡವಾಗಿ ಆನ್ಲೈನ್ ಬುಕಿಂಗ್ ಮೂಲಕ ಈ ಸಮಾರಂಭಕ್ಕೆ ಪ್ರವೇಶ ಪಡೆಯಬಹುದಾಗಿದೆ. https://presidentofindia.nic.in or https://rashtrapatisachivalaya.gov.in/ಗೆ ಭೇಟಿ ನೀಡಿ ಮುಂಗಡ ಬುಕಿಂಗ್ ಮಾಡಬಹುದಾಗಿದೆ.

ರಾಷ್ಟ್ರ ಮಟ್ಟದಲ್ಲಿ‌ ಗಮನ‌ ಸೆಳೆಯುವ ಈ ಕಾರ್ಯಕ್ರಮಕ್ಕೆ ವಿಶೇಷ ಮಾನ್ಯತೆ ಇದ್ದು, ಬಹು ವರ್ಷಗಳಿಂದ ನಡೆದುಕೊಂಡು ಬಂದ ಪರಂಪರೆಯ ಅನಾವರಣವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...