alex Certify Har Ghar Thiranga : ಪ್ರೊಫ್ರೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Har Ghar Thiranga : ಪ್ರೊಫ್ರೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಚಳವಳಿಯಲ್ಲಿ ಭಾಗವಹಿಸುವಂತೆ ದೇಶದ ಜನತೆಗೆ ಕರೆ ನೀಡಿದರು.

ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ “ಅನನ್ಯ ಪ್ರಯತ್ನ” ದ ಭಾಗವಾಗಿ ತಮ್ಮ ಸೋಶಿಯಲ್ ಮೀಡಿಯಾದ ಡಿಪಿಯ ಚಿತ್ರವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸುವಂತೆ ಪ್ರಧಾನಿ ಜನರನ್ನು ಕೇಳಿಕೊಂಡರು. “#HarGharTiranga ಆಂದೋಲನದ ಸ್ಫೂರ್ತಿಯಲ್ಲಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ ಮತ್ತು ನಮ್ಮ ಪ್ರೀತಿಯ ದೇಶ ಮತ್ತು ನಮ್ಮ ನಡುವಿನ ಬಂಧವನ್ನು ಆಳಗೊಳಿಸುವ ಈ ವಿಶಿಷ್ಟ ಪ್ರಯತ್ನಕ್ಕೆ ಬೆಂಬಲ ನೀಡೋಣ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

“ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾನೆ ಮತ್ತು ಇದು ರಾಷ್ಟ್ರೀಯ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ #HarGharTiranga ಆಂದೋಲನದಲ್ಲಿ ಭಾಗವಹಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ. ತಿರಂಗಾದೊಂದಿಗೆ ನಿಮ್ಮ ಫೋಟೋಗಳನ್ನು ಇಲ್ಲಿ ಅಪ್ಲೋಡ್ ಮಾಡಿ… https://harghartiranga.com” ಎಂದು ಪ್ರಧಾನಿ ಹೇಳಿದರು.

ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನಕ್ಕೂ ಮೊದಲೇ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಾದ ಫೇಸ್ಬುಕ್ ಮತ್ತು ಟ್ವಿಟರ್ನ ಡಿಪಿಯನ್ನು ಬದಲಾಯಿಸಿದ್ದಾರೆ ಮತ್ತು ಈಗ ಅವರ ಡಿಪಿಯಲ್ಲಿ ತ್ರಿವರ್ಣ ಧ್ವಜದ ಫೋಟೋ ಇದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...