ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯವಾಗಿ ಗ್ರಾಮೀಣ ಸೇವೆ ನಿಯಮಗಳಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ.
ಈ ಕುರಿತು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರ ಪೈಕಿ ಸರ್ಕಾರಕ್ಕೆ ಅಗತ್ಯವಿರುವಷ್ಟು ಮಂದಿಯನ್ನು ಮಾತ್ರ ಕಡ್ಡಾಯ ಗ್ರಾಮೀಣ ಸೇವೆಗೆ ಮೆರಿಟ್ ಆಧಾರದ ಮೇಲೆ ಕೌನ್ಸೆಲಿಂಗ್ ಮೂಲಕ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಈ ಬಗ್ಗೆ ನಿಯಮಾವಳಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.
ಇದುವರೆಗೆ ವೈದ್ಯಕೀಯ ಪದವಿ ಪೂರೈಸಿದ ಎಲ್ಲರೂ ಕಡ್ಡಾಯವಾಗಿ ಒಂದು ವರ್ಷ ಸರ್ಕಾರಿ ಗ್ರಾಮೀಣ ಸೇವೆ ಸಲ್ಲಿಸಬೇಕಿತ್ತು. ಅಷ್ಟೂ ಮಂದಿಗೆ ಸರ್ಕಾರಿ ಸೇವೆಗೆ ಅವಕಾಶ ಮಾಡಿಕೊಳ್ಳಲು ಹುದ್ದೆಗಳು ಇಲ್ಲದ ಕಾರಣ ಖಾಲಿ ಹುದ್ದೆಗಳಿಗೆ ಮಾತ್ರ ಅನ್ವಯವಾಗುವಂತೆ ತಿದ್ದುಪಡಿ ಮಾಡಿತ್ತು.