ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ.
ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದು, ಇದರಿಂದಾಗಿ ಶಾಲೆ ಹಾಗೂ ಆಸ್ಪತ್ರೆ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಕೆಲ ದಿನಗಳಲ್ಲಿ ನಿಯಮಗಳಿಗೆ ಬದಲಾವಣೆ ತರಲಾಗುತ್ತದೆ ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಲಾಗಿದ್ದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದಾರೆ.