alex Certify BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು ಲಾಕಪ್ ಡೆತ್ ಅಲ್ಲ, ಆರೋಪಿಗೆ ಪಿಟ್ಸ್ ಬಂದಿತ್ತು. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಪಿಟ್ಸ್ ನಿಂದಾಗಿ ಆರೋಪಿ ಸಾವನ್ನಪ್ಪಿದ್ದಾನೆ. ಆದರೂ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ಠಾಣೆ ಪೊಲೀಸರು ಶುಕ್ರವಾರ ಆದಿಲ್ ಎಂಬ ಆರೋಪಿಯನ್ನು ಠಾಣೆಗೆ ಕರೆತರುತ್ತಿದ್ದಂತೆ ಆತ ಕುಸಿದುಬಿದ್ದಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಮೃತಪಟ್ಟಿದ್ದ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಆದಿಲ್ ಸಂಬಂಧಿಕರು ಇದು ಲಾಕಪ್ ಡೆತ್ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ಕಲ್ಲುತೂರಾಟ ನಡೆಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...