
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಯಾರಿಗೆ ಬೇಕಾದರೂ ಟಿಕೆಟ್ ಘೋಷಣೆ ಮಾಡಲಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈಗಾಗಲೇ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಕೆ ಬಿಜೆಪಿ ನಾಯಕರನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಹಾಗಾಗಿ ಜೆಡಿಎಸ್ ನಾಯಕರು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಲಿ ಎಂದು ಹೇಳಿದರು.
ಈಗಾಗಲೇ ಅಮಿತ್ ಶಾ ಕೂಡ ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ನವರು ಅಭ್ಯರ್ಥಿ ಘೋಷಿಸುತ್ತಾರೆ ಎಂದು ಹೇಳಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾಗಿರುವುದರಿಂದ ಅವರಿಗೆ ಯಾರು ಬೇಕೋ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಿ ಎಂದರು.
ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಲಿದೆ. ಮೂರು ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಹೇಳಿದರು. ಇನ್ನು ಸಿ.ಪಿ.ಯೋಗೇಶ್ವರ್ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡ್ತಾರೆ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೊ ಅದರಂತೆ ಆಗಲಿದೆ ಎಂದರು.