alex Certify ಚನ್ನಪಟ್ಟಣ ಉಪಚುನಾವಣೆ: ಸಂಸದ ಡಾ.ಮಂಜುನಾಥ್ ಪತ್ನಿ ಅನಸೂಯಾ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚನ್ನಪಟ್ಟಣ ಉಪಚುನಾವಣೆ: ಸಂಸದ ಡಾ.ಮಂಜುನಾಥ್ ಪತ್ನಿ ಅನಸೂಯಾ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಪ್ಲಾನ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಪಕ್ಷಗಳು ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿ ತೆಗೆದುಕೊಂಡಿದ್ದು, ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.

ಈಗಾಗಲೇ ಬೆಂಗಳೂರು ಗ್ರಾಮಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಉಪಚುನವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂದ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.

ಅನುಸೂಯಾ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...