alex Certify BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್?

ರಾಮನಗರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ನಟ ದರ್ಶನ್ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂಬ ಮಾತು ಕೇಳಿಬರುತ್ತಿದೆ.

ಚನ್ನಪಟ್ಟಣ ಉಪಚುನವಣೆಯಲ್ಲಿ ನಟ ದರ್ಶನ್ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಮುಂದಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುಳಿವು ನೀಡಿದ್ದು, ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿ.ಕೆ.ಸಹೋದರರು ಸಿದ್ಧತೆ ನಡೆಸಿದ್ದರು ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆ ಅಚ್ಚರಿ ಅಭ್ಯರ್ಥಿ ಈಗ ಜೈಲು ಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಪ್ಲಾನ್ ಮಾಡಲಾಗಿತ್ತು. ಅವರನ್ನು ಚುನಾವಣೆಗೆ ನಿಲ್ಲಿಸಲು ಡಿ.ಕೆ.ಬ್ರದರ್ಸ್ ಸಿದ್ಧತೆ ನಡೆಸಿದ್ದರು. ಆದರೆ ಆ ವ್ಯಕ್ತಿ ಈಗ ಜೈಲು ಸೇರಿದ್ದಾರೆ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಹೇಳುವ ಮೂಲಕ ನಟ ದರ್ಶನ್ ಅವರನ್ನು ಚನ್ನಪಟ್ಟಣ ಉಪಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಪ್ಲಾನ್ ನಡೆದಿತ್ತು ಎಂಬ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...