ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಎನ್ ಡಿಎ ಮೈತ್ರಿ ಕೂಟ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ಚುನಾವಣಾ ಪ್ರಚಾರದ ವೇಳೆ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೈಕ್ ನಿಂದ ಬಿದ್ದ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಬೈಕ್ ನಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಕಾರ್ಯಕರ್ತರು ಧಾವಿಸಿ ಬಂದು ನಿಖಿಲ್ ಅವರನ್ನು ಮೇಲಕೆತ್ತಿ ಉಪಚರಿಸಿದ್ದಾರೆ. ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬದಿದೆ.
ಸ್ವಲ್ಪಹೊತ್ತು ವಿಶ್ರಾಂತಿ ಪಡೆದ ಬಳಿಕ ನಿಖಿಲ್ ಮತ್ತೆ ಚುನಾವಣಾ ಪ್ರಚಾರ ಕಾರ್ಯ ಮುಂದುವರೆಸಿದ್ದಾರೆ.