
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿಲಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಫಲಿತಾಂಶ ಬಹುತೇಕ ನಿಚ್ಚಳವಾಗಿ ಹೊರಬೀಳಲಿದೆ.
ನ.13ರಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.
ಚನ್ನಪಟ್ಟಣದಲ್ಲಿ 5ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹಿನ್ನಡೆಯಲ್ಲಿದ್ದಾರೆ.
5ನೇ ಸುತಿನ ಮತ ಎಣಿಕೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಸಿ.ಪಿ.ಯೋಗೇಶ್ವರ್ ಗಿಂತ 1302 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.