ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಹೆಚ್ಚೆ ಹಾಕಿದ್ದಾರೆ.
ಈಗಾಗಲೇ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಿನ್ನಡೆ ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್, ಬಿಜೆಪಿಯ ಭರತ್ ಬೊಮ್ಮಾಯಿಗಿಂತ ಮುನ್ನಡೆಯಲ್ಲಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭಾರಿ ಹಿನ್ನಡೆ ಅನುಭವಿಸಿದ್ದಾರೆ.
ಸಿ.ಪಿ.ಯೋಗೇಶ್ವರ್ 22,548 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸುತ್ತಿದಂತೆ ಯೋಗೇಶ್ವರ್ ಪತ್ನಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.