ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ವಿಶ್ವಾಸ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ತೌಟಹಳ್ಳಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದ ದಾರಿ ತಪ್ಪಿಸುವ ಕೆಲಸ ನಡೆಯಿತು. ಕಾಂಗ್ರೆಸ್ ನವರ ಕುತಂತ್ರ ರಾಜಕಾರಣ ಈಗ ವಿಫಲವಾಗಿದೆ. ಚನ್ನಪಟ್ಟಣ ಕ್ಷೇತ್ರದ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚನ್ನಪಟ್ಟಣ ಕ್ಷೇತ್ರದಲ್ಲಿ ದೊಡ್ಡಮಟ್ಟದಲ್ಲಿ ಬದಲಾವಣೆಯಾಗಿದೆ ಎಂದು ಹೇಳೀದ್ದಾರೆ.
ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಬೇಕೆಂದು ಮತದಾರರಲ್ಲಿ ಭಾವನೆ ಮೂಡಿದೆ. ಹೆಚ್.ಡಿ. ದೇವೇಗೌಡರು, ಬಿಜೆಪಿ ನಾಯಕರ ಪ್ರಚಾರ ಗೆಲುವಿಗೆ ಸಹಕಾರಿಯಾಗಿದೆ. ಚನ್ನಪಟ್ಟಣ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಇಲ್ಲಿ ಗೆದ್ದು ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಬೇಕು ಎಂದುಕೊಂಡಿದ್ದರು. ಸಿಎಂ, ಡಿಸಿಎಂ ಲೆಕ್ಕಾಚಾರ ತಲೆಕೆಳಗಾಗಲಿದೆ. ಜನ ತಕ್ಕ ಉತ್ತರ ಕೊಡುತ್ತಾರೆ. ಫಲಿತಾಂಶ ನಿಖಿಲ್ ಶಾಸಕನಾಗಿ ಹೇಗೆ ಕೆಲಸ ಮಾಡುತ್ತಾನೆಂಬ ಸಂದೇಶ ನೀಡಲಿದೆ. ನನ್ನ ಕೆಲಸ ನೋಡಿ ಚನ್ನಪಟ್ಟಣ ಕ್ಷೇತ್ರದ ಜನ ಮೆಚ್ಚಿಗೆ ಮತ ನೀಡುತ್ತಾರೆ ಎಂದು ಹೇಳಿದ್ದಾರೆ.