alex Certify BIG BREAKING NEWS: ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ, ಸಿಎಂ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ, ಸಿಎಂ ಸಂತಾಪ

ಧಾರವಾಡ: ನಾಡೋಜ ಚೆನ್ನವೀರ ಕಣವಿ ಕೊನೆಯುಸಿರು ಧಾರವಾಡ ಕವಿ ಚನ್ನವೀರ ಕಣವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸಿಎಂ ಸಂತಾಪ:

ಚೆನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.  ಸಜ್ಜನಿಕೆಗೆ ಸಾಕಾರ ಮೂರ್ತಿಯಾಗಿದ್ದ ಚೆನ್ನವೀರ ಕಣವಿಯವರು ಮೃದು ಮಾತುಗಳಿಂದಲೇ ಮನಸನ್ನು ಗೆಲ್ಲುತ್ತಿದ್ದರು. ಪ್ರಶಸ್ತಿಗೆ ಗೌರವ ತರುವಂತೆ ಅವರ ವ್ಯಕ್ತಿತ್ವ ಇರುತ್ತಿತ್ತು. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕಣವಿಯವರ ಜೀವನ

ಚೆನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928 ರ ಜೂನ್ 28 ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು.

1956 ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ 1983 ರವರೆಗೆ ಸೇವೆ ಸಲ್ಲಿಸಿದರು. ಅವರ ಪತ್ನಿ ಶಾಂತಾದೇವಿ ಅವರು ಕೂಡ ಸಾಹಿತ್ಯ ಸಂಸ್ಕೃತಿಯ ಒಲವುಳ್ಳ ದೊಡ್ಡ ಮನೆತನದಿಂದ ಬಂದವರು.

ಕಾವ್ಯ ಲೋಕದಲ್ಲಿ

ಚೆನ್ನವೀರ ಕಣವಿಯವರು ವಿಮರ್ಶೆಯನ್ನು ಬರೆದಿದ್ದರಾದರೂ ಪ್ರಧಾನವಾಗಿ ಅವರು ಕವಿ. ಚೆನ್ನವೀರ ಕಣವಿಯವರು ನವೋದಯದ ‘ನಡುಹಗಲ’ ಕಾಲದಲ್ಲಿ. ಬೇಂದ್ರೆ, ಕುವೆಂಪು, ಪು.ತಿ.ನ, ಮಧುರಚೆನ್ನ ಮೊದಲಾದವರ ಕಾವ್ಯ ಹೊಸದಾಗಿ ಕಾವ್ಯ ರಚನೆಗೆ ತೊಡಗುವವರನ್ನು ಗಾಢವಾಗಿ ಪ್ರಭಾವಿಸುತ್ತಿದ್ದ ಕಾಲ ಅದು.

ಕಣವಿ ಅವರ ಪ್ರಾರಂಭದ ರಚನೆಗಳಲ್ಲಿ ಇಂಥ ಪ್ರಭಾವಗಳ ನೆಲೆಯನ್ನು ಗುರುತಿಸಬಹುದಾಗಿದ್ದು, ಅವರ ಕಾವ್ಯದಲ್ಲಿ ರಮ್ಯ ಮನೋಧರ್ಮ, ಆದರ್ಶಪ್ರಿಯತೆ, ವ್ಯಕ್ತಿತ್ವ ನಿರ್ಮಾಣದ ಹಂಬಲಗಳು ವಿಶೇಷವಾಗಿ ಕಂಡು ಬರುತ್ತವೆ. 1949 ರಲ್ಲಿ ಪ್ರಕಟವಾದ ‘ಕಾವ್ಯಾಕ್ಷಿ’, 1950 ರಲ್ಲಿ ಪ್ರಕಟವಾದ ‘ಭಾವಜೀವಿ’ ಸಂಗ್ರಹಗಳಲ್ಲಿ ಈ ಎಲ್ಲ ಅಂಶಗಳನ್ನೂ ಗುರುತಿಸಬಹುದು.

1953 ರಲ್ಲಿ ಕಣವಿಯವರ ಮೂರನೆಯ ಸಂಗ್ರಹ ‘ಆಕಾಶಬುಟ್ಟಿ’ ಪ್ರಕಟವಾಯಿತು. ಬಸವರಾಜ ಕಟ್ಟೀಮನಿ, ನಿರಂಜನ, ಎಕ್ಕುಂಡಿ ಮೊದಲಾದವರ ಸ್ನೇಹ ಸಂಪರ್ಕ ಮತ್ತು ಆಗ ಪ್ರಚಲಿತವಿದ್ದ ಪ್ರಗತಿಶೀಲ ಸಾಹಿತ್ಯ ಚಳವಳಿ ಅವರನ್ನು ಪ್ರಭಾವಿಸಿರಬಹುದು. ಆಕಾಶಬುಟ್ಟಿ ಸಂಗ್ರಹದಲ್ಲಿರುವ ಪ್ರಜಾಪ್ರಭುತ್ವ ಎಂಬ ಕವಿತೆ ಯನ್ನು ನಾವಿಲ್ಲಿ ವಿಶೇಷವಾಗಿ ನೆನೆಯಬೇಕು. ಪ್ರತಿಮಾನಿಷ್ಠವಾದ ಈ ಕವಿತೆ ಕಣವಿ ಅವರ ಮುಂದಿನ ಕಾವ್ಯದ ಮುನ್ಸೂಚನೆಯಂತಿದೆ.

ಕಣವಿ ಸಾಹಿತ್ಯ

ಕಾವ್ಯಸಂಕಲನ

ಕಾವ್ಯಾಕ್ಷಿ

ಭಾವಜೀವಿ

ಆಕಾಶಬುಟ್ಟಿ

ಮಧುಚಂದ್ರ

ಮಣ್ಣಿನ ಮೆರವಣಿಗೆ

ದಾರಿ ದೀಪ

ನೆಲ ಮುಗಿಲು

ಎರಡು ದಡ

ನಗರದಲ್ಲಿ ನೆರಳು

ಜೀವಧ್ವನಿ

ಕಾರ್ತೀಕದ ಮೋಡ

ಜೀನಿಯಾ

ಹೊಂಬೆಳಕು

ಶಿಶಿರದಲ್ಲಿ ಬಂದ ಸ್ನೇಹಿತ

ಚಿರಂತನ ದಾಹ(ಆಯ್ದ ಕವನಗಳು)

ಹೂವು ಹೊರಳುವವು ಸೂರ್ಯನ ಕಡೆಗೆ

ವಿಮರ್ಶಾಲೇಖನಗಳು ಹಾಗು ಪ್ರಬಂಧ ಸಂಕಲನಗಳು

ಸಾಹಿತ್ಯಚಿಂತನ

ಕಾವ್ಯಾನುಸಂಧಾನ

ಸಮಾಹಿತ

ಮಧುರಚೆನ್ನ

ಸಮತೋಲನ

ಮಕ್ಕಳ ಕವಿತೆ

ಹಕ್ಕಿ ಪುಕ್ಕ

ಚಿಣ್ಣರ ಲೋಕವ ತೆರೆಯೋಣ

ಸಂಪಾದನೆ

ಕನ್ನಡದ ಕಾಲು ಶತಮಾನ

ಸಿದ್ಧಿ ವಿನಾಯಕ ಮೋದಕ

ಕವಿತೆಗಳು

ಸಂಪಾದನೆ (ಇತರರೊಂದಿಗೆ)

ನವಿಲೂರು ಮನೆಯಿಂದ

ನವ್ಯಧ್ವನಿ

ನೈವೇದ್ಯ

ನಮ್ಮೆಲ್ಲರ ನೆಹರೂ

ಜೀವನ ಸಿದ್ಧಿ

ಆಧುನಿಕ ಕನ್ನಡ ಕಾವ್ಯ

Modern Kannada Poetry

ಸುವರ್ಣ ಸಂಪುಟ

ರತ್ನ ಸಂಪುಟ

ಬಾಬಾ ಫರೀದ

ಪ್ರಶಸ್ತಿ ಪುರಸ್ಕಾರಗಳು

ಇವರ “ಜೀವಧ್ವನಿ” ಎಂಬ ಕೃತಿಗೆ 1981ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.

1996 ರಲ್ಲಿ ಹಾಸನದಲ್ಲಿ ನಡೆದ 65 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿದ್ದರು.

ಆಳ್ವಾಸ್ -ನುಡಿಸಿರಿ 2008ರ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,

ರಾಜ್ಯೋತ್ಸವ ಪ್ರಶಸ್ತಿ,

ಪಂಪ ಪ್ರಶಸ್ತಿ,

ಬಸವ ಗುರು ಕಾರುಣ್ಯ ಪ್ರಶಸ್ತಿ,

ನಾಡೋಜ ಪ್ರಶಸ್ತಿ,

ಕರ್ನಾಟಕ ಕವಿರತ್ನ ಪ್ರಶಸ್ತಿ,

2020 ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಅನಕೃ ನಿರ್ಮಾಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಕಣವಿಯವರ ಸಾಧನೆಗೆ ಸಿಕ್ಕ ಗೌರವಗಳು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...