ಧಾರವಾಡ: ಅನಾರೋಗ್ಯದಿಂದಾಗಿ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಉಸಿರಾಟದ ಸಮಸ್ಯೆಯಿಂದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸೋಮವಾರ ಕಣವಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಎದೆಯ ಸೋಂಕು ಕಡಿಮೆಯಾಗಿಲ್ಲ. ಆಸ್ಪತ್ರೆ ವೈದ್ಯರ ತಂಡದಿಂದ ನಿರಂತರ ನಿಗಾವಹಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ಹಿಂದೆಯೇ ಹೇಳಿದ್ದರು.