ಮಲೆಯಾಳಂನ ಬಹು ನಿರೀಕ್ಷಿತ ತಳ್ಳುಮಾಲಾ ಆಗಸ್ಟ್ 12ರಂದು ಬಿಡುಗಡೆಗೆ ಸಿದ್ಧವಾಗಿದೆ. ಟೊವಿನೋ ಥಾಮಸ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಚಿತ್ರದ ಪ್ರಮುಖ ಪಾತ್ರ ನಿಭಾಯಿಸಿದ್ದು, ಇದೀಗ ಚಿತ್ರದ ತಯಾರಕರು ಪ್ರಚಾರದ ಭರಾಟೆಯಲ್ಲಿದ್ದಾರೆ.
ಕೋಝಿಕ್ಕೋಡ್ನಲ್ಲಿರುವ ಮಾಲ್ನಲ್ಲಿ ಪ್ರಚಾರ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ನಿರೀಕ್ಷೆ ಇರುವುದರಿಂದ ಸಾವಿರಾರು ಜನ ಅಲ್ಲಿಗೆ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಕಾರ್ಯಕ್ರಮವನ್ನೇ ರದ್ದುಪಡಿಸಬೇಕಾಗಿ ಬಂದಿತು.
ಸುರಕ್ಷತೆಯ ಕಾರಣದಿಂದ ಪ್ರಚಾರ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಯಿತು ಎಂದು ಚಿತ್ರತಂಡ ಹೇಳಿಕೊಂಡಿದ್ದು, ಮಾಲ್ನ ಅಸ್ತವ್ಯಸ್ತ ಸನ್ನಿವೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಲನಚಿತ್ರ ವಿತರಕ ಎಬಿ ಜಾರ್ಜ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಪ್ರೇಕ್ಷಕರು ಮಾಲ್ನಲ್ಲಿ ತುಂಬಿಹೋಗಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಿಸಿದ್ದಾರೆ.
ಮಾಲ್ನೊಳಗೆ ಇಷ್ಟೊಂದು ದೊಡ್ಡ ಸೇರಲು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟ ಬಗ್ಗೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದು, ಮಾಲ್ನವರು ಸುರಕ್ಷತಾ ಮಾನದಂಡ ಅನುಸರಿಸದಿರುವ ಬಗ್ಗೆ ಆಕ್ಷೇಪಿಸಿದ್ದಾರೆ.