alex Certify ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ…?

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿಗಳು ಮಹಿಳೆಗೆ ಕಚ್ಚಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರ ಹೆಸರು ಸೇರಿಸದಿರಲು ಪೊಲೀಸರು ತೀರ್ಮಾನಿಸಿದ್ದಾರೆ.

ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಅವರ ಮನೆಯ ಸಾಕಿದ ನಾಯಿಗಳು ಕಚ್ಚಿದ್ದು, ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದರ್ಶನ್ ಕೂಡ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣ ನಡೆಯುವ ಸಂದರ್ಭದಲ್ಲಿ ತಾವು ಇರಲಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದರು.

ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದನ್ನು ಗಮನಿಸಿ ಅವರ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...