ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 800 ಪುಟಗಳ ಚಾರ್ಜ್ ಶೀಟ್ ಅನ್ನು ಹುಬ್ಬಳ್ಳಿಯ ಒಂದನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಜುಲೈ 5 ರಂದು ಉಣಕಲ್ ಕ್ರಾಸ್ ಸಮೀಪದ ಖಾಸಗಿ ಹೋಟೆಲ್ ನಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಂತೇಶ ಶಿರೂರು ಮತ್ತು ಮಂಜುನಾಥ ಅವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ ಇದಾಗಿದ್ದು, ಚಂದ್ರಶೇಖರ ಗುರೂಜಿ ಹತ್ಯೆಯಾದ ಮೂರು ತಿಂಗಳ ನಂತರ ನ್ಯಾಯಾಲಯಕ್ಕೆ ಸುಮಾರು 800 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.