ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಜೈಲು ಪಾಲಾಗಿರುವ ಮುರುಘಾ ಶರಣರ ವಿರುದ್ಧ ತನಿಖೆ ನಡೆಸಿದ ಚಿತ್ರದುರ್ಗ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮುರುಘಾ ಶರಣರ ವಿರುದ್ಧ 347 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ
ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣದ ಪ್ರಾಥಮಿಕ ತನಿಖೆ ಮಾಡಿದ ಪೊಲೀಸರು ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮೊದಲನೇ ಎಫ್ಐಆರ್ ತನಿಖೆ ಮಾಡಿ ಚಿತ್ರದುರ್ಗದ ಎರಡನೇ ಹೆಚ್ಚುವರಿ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಸ್ವಾಮೀಜಿ. ಹಾಸ್ಟೆಲ್ ವಾರ್ಡನ್ ರಶ್ಮಿ, ಮ್ಯಾನೇಜರ್ ಪರಮಶಿವಯ್ಯ, ಬಸವಾದಿತ್ಯ, ಗಂಗಾಧರ ಅವರ ವಿರುದ್ಧ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.
ಎ 1 ಆರೋಪಿ ಮುರುಘಾ ಸ್ವಾಮೀಜಿ ವಿರುದ್ಧ 347 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎ 2 ವಾರ್ಡನ್ ರಶ್ಮಿ, ಎ 4 ಮಠದ ಕಾರ್ಯದರ್ಶಿ ಪರಮಶಿವಯ್ಯ ವಿರುದ್ಧವೂ 347 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎ 3 ಮಠದ ಉತ್ತರಾಧಿಕಾರಿ ಹಾಗೂ ಎ 5 ವಕೀಲ ಗಂಗಾಧರಯ್ಯ ವಿರುದ್ಧ ಸಾಕ್ಷ ಅಲಭ್ಯ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲಾಗಿದೆ.
ಡಿವೈಎಸ್ಪಿ ಅನಿಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗಿತ್ತು. ಆ. 26 ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆ. 27 ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ಸೆ.1 ರಂದು ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು.