ಬೆಂಗಳೂರು : ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ, ದರ್ಶನ್ ರನ್ನು ಎ 1 ಆರೋಪಿ ಮಾಡುವ ವಿಚಾರ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆಯಿದೆ. ದರ್ಶನ್ ಪ್ರಕರಣದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ದೆಹಲಿಗೆ ಹೋದರೆ ವರಿಷ್ಟರ ಭೇಟಿ ಆಗೋದು, ಸಂಪ್ರದಾಯ. ಹಾಗಾಗಿ ಸತೀಶ್ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಇದಕ್ಕೆ ರಾಜಕೀಯ ಬಣ್ಣ ಬಳಿಯೋದು ಬೇಡ ಎಂದು ಪರಮೇಶ್ವರ್ ಹೇಳಿದ್ದಾರೆ.